ಬೆಳಗಾವಿ: ಬೆಳಗಾವಿ ಪರಿಷತ್ ಅಖಾಡ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ಜಿದ್ದಾ-ಜಿದ್ದಿ ಏರ್ಪಟ್ಟಿತ್ತು. ಆದರೆ ಇದೀಗ ಬೆಳಗಾವಿಯಲ್ಲಿ ಬಿಜೆಪಿಗೆ ಆರಂಭಿಕ ಆಘಾತ ಎದುರಾಗಿದೆ.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೋಳಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ 2ನೇ ಸ್ಥಾನದಲ್ಲಿದ್ದು, ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಏಳು ವಾರಗಳ ಕೋವಿಡ್ ಕೋಮಾದಿಂದ ಎಚ್ಚರವಾದಾಗ ಹೆಣ್ಣು ಮಗುವಿಗೆ ಜನ್ಮ ನೀಡಿರುವುದನ್ನು ಕಂಡುಕೊಂಡ ಮಹಿಳೆ..!
ಬೆಳಗಾವಿಯಲ್ಲಿ ಜಾರಕಿಹೊಳಿ ಬಂಡಾಯವೇ ಬಿಜೆಪಿಗೆ ಮುಳುವಾಗಲಿದೆ ಎಂದು ಹೇಳಲಾಗುತ್ತಿದೆ. ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿಗೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇದು ಬಿಜೆಪಿ ಸೋಲಿಗೂ ಕಾರಣವಾಗುವ ಸಾಧ್ಯತೆ ದಟ್ಟವಾಗಿದೆ.