alex Certify ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಅಗತ್ಯವಿಲ್ಲ: ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್‌ ಭಾಗ್ವತ್‌ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಅಗತ್ಯವಿಲ್ಲ: ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್‌ ಭಾಗ್ವತ್‌ ಮಹತ್ವದ ಹೇಳಿಕೆ

ಪ್ರತಿಯೊಂದು ಮಸೀದಿಯಲ್ಲೂ ಶಿವಲಿಂಗವನ್ನು ಹುಡುಕುವ ಮತ್ತು ಈ ಬಗ್ಗೆ ಹೊಸ ವಿವಾದಗಳನ್ನು ಸೃಷ್ಟಿಸುವ ಅಗತ್ಯವಿಲ್ಲ ಎಂದು ಆರ್.ಎಸ್.ಎಸ್. ಮುಖ್ಯಸ್ಥರಾದ ಮೋಹನ್ ಭಾಗವತ್ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಜ್ಞಾನವಾಪಿ ಮಸೀದಿಯ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಜ್ಞಾನವಾಪಿ ವಿವಾದ ನಂಬಿಕೆ ಸಂಬಂಧಪಟ್ಟ ವಿಚಾರವಾಗಿದೆ. ಈ ಬಗ್ಗೆ ನ್ಯಾಯಾಲಯ ನೀಡುವ ತೀರ್ಪನ್ನು ಎಲ್ಲರೂ ಒಪ್ಪಬೇಕಾಗುತ್ತದೆ ಎಂದು ಹೇಳಿದ್ದಾರೆ.

ಅವರು ಗುರುವಾರ ಆರ್.ಎಸ್.ಎಸ್. ನ ಮೂರನೇ ಅಧಿಕಾರಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ವಾರಾಣಾಸಿಯಲ್ಲಿ ಜ್ಞಾನವಾಪಿ ಮಸೀದಿಯ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇತಿಹಾಸವನ್ನು ಯಾರೂ ತಿರುಚಲು ಸಾಧ್ಯವಿಲ್ಲ. ಈಗಿನ ಹಿಂದೂಗಳಾಗಲೀ ಅಥವಾ ಮುಸ್ಲಿಂರಾಗಲೀ ಹೊಸದಾಗಿ ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಈ ಹಿಂದೆ ಮುಸ್ಲಿಂರು ಆಕ್ರಮಣಕಾರರಾಗಿ ಭಾರತಕ್ಕೆ ಬಂದ ಸಂದರ್ಭದಲ್ಲಿ ಇವೆಲ್ಲವೂ ಸಂಭವಿಸಿದ್ದವು. ಈ ಆಕ್ರಮಣಕಾರರು ಸ್ವಾತಂತ್ರ್ಯ ಬಯಸಿದ್ದ ಭಾರತೀಯರ ಆತ್ಮಸ್ಥೈರ್ಯವನ್ನು ಕುಂದಿಸುವ ಸಲುವಾಗಿ ದೇವಾಲಯಗಳನ್ನು ಧ್ವಂಸಗೊಳಿಸಿದ್ದರು. ಹೀಗೆ ಧ್ವಂಸಗೊಂಡ ಸಾವಿರಾರು ದೇವಾಲಯಗಳು ನಮ್ಮ ದೇಶದಲ್ಲಿವೆ. ಈ ಬಗ್ಗೆ ಆರ್.ಎಸ್.ಎಸ್. ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಮಸೀದಿಯಲ್ಲೂ ಶಿವಲಿಂಗವನ್ನು ಹುಡುಕುವ ಪ್ರಯತ್ನವನ್ನು ಕೈಬಿಡಬೇಕೆಂದು ಅವರು ಕರೆ ನೀಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...