alex Certify ಪ್ರಧಾನಿ ನರೇಂದ್ರ ಮೋದಿಯವರಿಗಿಂದು ಹುಟ್ಟು ಹಬ್ಬದ ಸಂಭ್ರಮ; ಅಭಿನಂದನೆಗಳ ಮಹಾಪೂರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ನರೇಂದ್ರ ಮೋದಿಯವರಿಗಿಂದು ಹುಟ್ಟು ಹಬ್ಬದ ಸಂಭ್ರಮ; ಅಭಿನಂದನೆಗಳ ಮಹಾಪೂರ

ಪ್ರಧಾನಿ ನರೇಂದ್ರ ಮೋದಿಯವರು ಇಂದು 72ನೇ ವಸಂತಕ್ಕೆ ಕಾಲಿಟ್ಟಿದ್ದು, ದೇಶ – ವಿದೇಶಗಳ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಜೊತೆಗೆ ಅಭಿಮಾನಿಗಳು, ಬಿಜೆಪಿ ನಾಯಕರು, ಕಾರ್ಯಕರ್ತರು ರಕ್ತದಾನ ಶಿಬಿರ, ಹೆಲ್ತ್ ಕ್ಯಾಂಪ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ದೇಶದಾದ್ಯಂತ ಬಿಜೆಪಿ ವತಿಯಿಂದ ‘ಸೇವಾ ದಿವಸ್’ ಆಚರಿಸಲಾಗುತ್ತಿದ್ದು, ಇದರ ಜೊತೆಗೆ ಮೋದಿ ಸರ್ಕಾರ ಜಾರಿಗೆ ತಂದಿರುವ ಜನ ಕಲ್ಯಾಣ ಕಾರ್ಯಕ್ರಮಗಳ ಪ್ರಚಾರ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಮೋದಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಲಾಗುತ್ತಿದೆ.

ಮೋದಿಯವರ ಅಭಿಮಾನಿಗಳು ಸಾಮಾಜಿಕ ಜಾಲತಾಣದ ತಮ್ಮ ಡಿಪಿಯಲ್ಲಿ ಅವರ ಫೋಟೋ ಹಾಕಿಕೊಂಡು ಸಂಭ್ರಮಿಸಿದ್ದಾರೆ. ಮೋದಿಯವರಿಗೆ ಅವರ ಸಂಪುಟ ಸಹೋದ್ಯೋಗಿಗಳು ಸಹ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...