alex Certify ಪ್ರಧಾನಿ ಬಳಿಕ ಈಗ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ ಮತ್ತೊಂದು ವಿಮಾನ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಬಳಿಕ ಈಗ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ ಮತ್ತೊಂದು ವಿಮಾನ….!

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದು, ಅವರು ಪ್ರಯಾಣಿಸಿದ ವಿಮಾನವೇ ಮೊಟ್ಟ ಮೊದಲ ಬಾರಿಗೆ ನೂತನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು.

ಅದಾದ ಬಳಿಕ ಮತ್ತೊಂದು ಕಾರ್ಯಕ್ರಮಕ್ಕಾಗಿ ಕರ್ನಾಟಕಕ್ಕೆ ಭೇಟಿ ನೀಡಿದ್ದ ನರೇಂದ್ರ ಮೋದಿಯವರು ವಿಶೇಷ ವಿಮಾನದ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣದಿಂದಲೇ ವಾಪಸ್ ದೆಹಲಿಗೆ ತೆರಳಿದ್ದರು.

ಅದಾದ ಬಳಿಕ ಪ್ರಯಾಣಿಕರ ವಿಮಾನ ಸಂಚಾರ ಆರಂಭಕ್ಕೆ ಪ್ರಯತ್ನಗಳು ನಡೆದಿರುವ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹುಬ್ಬಳ್ಳಿ ಮೂಲಕ ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಹೀಗಾಗಿ ಪ್ರಧಾನಿಯವರ ಬಳಿಕ ಈಗ ಸಿಎಂ ಅವರ ವಿಮಾನ ನೂತನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...