alex Certify ಪ್ರಧಾನಿ ಮೋದಿಯವರಿಗೆ ನೀಡಲು ‘ಚಿನ್ನ’ ಲೇಪಿತ ಸ್ಮರಣಿಕೆ ರೆಡಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿಯವರಿಗೆ ನೀಡಲು ‘ಚಿನ್ನ’ ಲೇಪಿತ ಸ್ಮರಣಿಕೆ ರೆಡಿ…!

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ನಾಳೆ ಮೈಸೂರಿನಲ್ಲಿ ನಡೆಯಲಿರುವ ‘ವಿಶ್ವ ಯೋಗ ದಿನಾಚರಣೆ’ ಯಲ್ಲಿ ನರೇಂದ್ರ ಮೋದಿಯವರು ಭಾಗವಹಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಮೈಸೂರಿನಲ್ಲಿ ಬಿಗಿ ಭದ್ರತೆಯೊಂದಿಗೆ ಭಾರಿ ಸಿದ್ಧತೆ ಕೈಗೊಳ್ಳಲಾಗಿದ್ದು, ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ಸೇರಿದಂತೆ ಕೆಲವೊಂದು ಸೂಚನೆಗಳನ್ನು ನೀಡಲಾಗಿದೆ.

ಇದರ ಮಧ್ಯೆ ಮೈಸೂರಿನ ನವರತ್ನ ಜ್ಯುವೆಲ್ಲರ್ಸ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶ್ವ ಯೋಗ ದಿನಾಚರಣೆಗೆ ಮೈಸೂರನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಬಂಗಾರದ ಅಕ್ಷರಗಳಿಂದ ಮಾಡಿಸಲಾಗಿರುವ ಕೃತಜ್ಞತಾ ಸ್ಮರಣಿಕೆ ನೀಡಲಾಗುತ್ತದೆ.

ಇದರಲ್ಲಿ ಮೈಸೂರು ಅರಮನೆ, ಮೋದಿ ಯೋಗದ ಭಂಗಿ, ನರೇಂದ್ರ ಮೋದಿಯವರ ಭಾವಚಿತ್ರ, ಯೋಗದ ಶ್ಲೋಕಗಳ ಕೆತ್ತನೆಯೂ ಇರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...