ಪ್ರವಾದಿ ಮಹಮದ್ ವಿರುದ್ಧ ನೂಪುರ್ ಶರ್ಮಾ ನೀಡಿರುವ ಹೇಳಿಕೆ ಕುರಿತಂತೆ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ನೂಪುರ್ ಶರ್ಮಾರನ್ನು ಬಂಧಿಸಬೇಕೆಂಬ ಒತ್ತಾಯ ಕೇಳಿಬರುತ್ತಿದ್ದು, ಕೆಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ.
ನೂಪುರ್ ಶರ್ಮಾ ವಿರುದ್ಧ ಈಗಾಗಲೇ ದೇಶದ ವಿವಿಧ ಭಾಗಗಳಲ್ಲಿ ದೂರು ದಾಖಲಿಸಲಾಗಿದ್ದು, ಬಂಧನಕ್ಕೆ ಒತ್ತಡ ಹೆಚ್ಚಾಗತೊಡಗಿದೆ. ಇದರ ಮಧ್ಯೆ ಇಸ್ಲಾಂ ಗುರುಗಳು ಪ್ರತಿಭಟನೆ ನಡೆಸದಂತೆ ಮನವಿ ಮಾಡಿದ್ದಾರೆ.
ಇದೀಗ ಉತ್ತರ ಪ್ರದೇಶದ ಮೂಲದ ಮೌಲ್ವಿಯೊಬ್ಬರು ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ, ಪ್ರಧಾನಿ ನರೇಂದ್ರ ಮೋದಿಯವರನ್ನು ಕಲಿಯುಗದ ಧೃತರಾಷ್ಟ್ರ ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ಕಾರಣರಾಗಿದ್ದಾರೆ.