ಕಳೆದ ವರ್ಷದ ಆರಂಭದಲ್ಲಿ ವಿಶ್ವದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್, ಭಾರತದಲ್ಲಿ ಈಗಾಗಲೇ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಇದೀಗ ಕೊರೊನಾ ಕಡಿಮೆಯಾಗುತ್ತಿರುವ ಮಧ್ಯೆ ಮತ್ತೆ ಎರಡನೇ ಅಲೆ ಕಾಣಿಸಿಕೊಂಡಿದೆ ಎಂಬ ವರದಿಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಈ ನಡುವೆ ಭಾರತದಲ್ಲಿ ಭಾರತ್ ಬಯೋಟೆಕ್ ʼಕೋವ್ಯಾಕ್ಸಿನ್ʼ ಎಂಬ ಕೊರೊನಾ ಲಸಿಕೆ ತಯಾರಿಸಿದ್ದರೆ ಪುಣೆ ಮೂಲದ ಸೀರಂ ಇನ್‌ಸ್ಟಿಟ್ಯೂಟ್ ʼಕೋವಿಶೀಲ್ಡ್ʼ ಎಂಬ ಲಸಿಕೆಯನ್ನು ತಯಾರಿಸಿದೆ. ಈ ಎರಡೂ ಲಸಿಕೆಗಳನ್ನು ಈಗಾಗಲೇ ನೀಡಲಾಗುತ್ತಿದ್ದು, ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ ಗೆ ಲಸಿಕೆ ನೀಡಲಾಗಿದೆ.
ಇಂದಿನಿಂದ ಎರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳಿರುವವರಿಗೆ ಲಸಿಕೆ ನೀಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೊರೊನಾದ ಮೊದಲ ಡೋಸ್ ಲಸಿಕೆ ಪಡೆದಿದ್ದು, ಅವರಿಗೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.