ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಬಿಜೆಪಿಗೆ ಪರ್ಯಾಯ ರಾಜಕೀಯ ಶಕ್ತಿ ಹುಟ್ಟುಹಾಕಲು ನಿರಂತರವಾಗಿ ಪ್ರಯತ್ನ ನಡೆಸಿದ್ದಾರೆ. ಜೊತೆಗೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಪದೇ ಪದೇ ಟೀಕಿಸುತ್ತಿದ್ದಾರೆ. ಅಲ್ಲದೆ ನರೇಂದ್ರ ಮೋದಿಯವರ ಜೊತೆ ಮುಖಾಮುಖಿಯಾಗುವುದನ್ನು ಸಹ ತಪ್ಪಿಸಿಕೊಳ್ಳುತ್ತಿದ್ದಾರೆ.
ಬಿಜೆಪಿಗೆ ಪರ್ಯಾಯ ಶಕ್ತಿ ಹುಟ್ಟು ಹಾಕುವ ಸಲುವಾಗಿ ಕೆ. ಚಂದ್ರಶೇಖರ ರಾವ್ ಬಿಜೆಪಿಯೇತರ ಪಕ್ಷಗಳ ನಾಯಕರನ್ನು ಭೇಟಿಯಾಗುತ್ತಿದ್ದು, ಈಗಾಗಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೊದಲಾದವರನ್ನು ಭೇಟಿಯಾಗಿದ್ದಾರೆ.
ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮಂಡಕ್ಕಿ ದರವೂ ಏರಿಕೆ
ಇದೀಗ ಗುರುವಾರದಂದು ಬೆಂಗಳೂರಿಗೆ ಆಗಮಿಸಿದ್ದ ಕೆ. ಚಂದ್ರಶೇಖರ ರಾವ್, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದಾರೆ. ಇದಕ್ಕಾಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯನ್ನೇ ತಪ್ಪಿಸಿಕೊಂಡಿದ್ದಾರೆ.
ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿಯವರು ಹೈದರಾಬಾದಿಗೆ ಭೇಟಿ ನೀಡಿದ್ದರೆ, ಕೆ. ಚಂದ್ರಶೇಖರ ರಾವ್ ಬೆಂಗಳೂರಿಗೆ ಬಂದಿದ್ದಾರೆ. ಈ ಮೂಲಕ ಕೆಸಿಆರ್ ಮೂರನೇ ಬಾರಿಗೆ ಮೋದಿಯವರ ಭೇಟಿಯನ್ನು ತಪ್ಪಿಸಿಕೊಂಡಿದ್ದಾರೆ.