alex Certify ಪ್ರಧಾನಿ ಮೋದಿ ಸೂಚನೆಯಂತೆ ಉಕ್ರೇನ್​​ನ ಸಮೀಪದ ರಾಷ್ಟ್ರಗಳಿಗೆ ಪ್ರಯಾಣ ಬೆಳೆಸಲಿದ್ದಾರೆ ಈ ನಾಲ್ವರು ಕೇಂದ್ರ ಸಚಿವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ಸೂಚನೆಯಂತೆ ಉಕ್ರೇನ್​​ನ ಸಮೀಪದ ರಾಷ್ಟ್ರಗಳಿಗೆ ಪ್ರಯಾಣ ಬೆಳೆಸಲಿದ್ದಾರೆ ಈ ನಾಲ್ವರು ಕೇಂದ್ರ ಸಚಿವರು

ರಷ್ಯಾ – ಉಕ್ರೇನ್​ ನಡುವಿನ ಯುದ್ಧದ ನಡುವೆಯೇ ಕೇಂದ್ರ ಸರ್ಕಾರ ಉಕ್ರೇನ್​ನಲ್ಲಿ ನೆಲೆಸಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ನಿರತವಾಗಿದೆ. ಈ ಸಂಬಂಧ ಭಾನುವಾರ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಕೇಂದ್ರ ಸಚಿವರಾದ ಹರ್ದೀಪ್​ ಸಿಂಗ್​ ಪುರಿ, ಜ್ಯೋತಿರಾದಿತ್ಯ ಸಿಂಧ್ಯಾ, ಕಿರಣ್​ ರಿಜಿಜು ಹಾಗೂ ನಿವೃತ್ತ ಜನರಲ್​​ ವಿ ಕೆ ಸಿಂಗ್​​ ಉಕ್ರೇನ್​​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಜೊತೆ ಸಂಪರ್ಕ ಸಾಧಿಸಲು ಉಕ್ರೇನ್​ನ ಸ್ಥಳೀಯ ದೇಶಗಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.

ಕಳೆದ 24 ಗಂಟೆಗಳಲ್ಲಿ ಉಕ್ರೇನ್​ನ ವಿಚಾರವಾಗಿ ಪ್ರಧಾನಿ ಮೋದಿ ಕೈಗೊಂಡ ಎರಡನೇ ಉನ್ನತ ಮಟ್ಟದ ಸಭೆ ಇದಾಗಿದೆ. ಭಾನುವಾರದಂದು ಪ್ರಧಾನಿ ಮೋದಿ ಕೇಂದ್ರ ವಿದೇಶಾಂಗ ಸಚಿವ ಡಾ. ಜೈಶಂಕರ್​​ ಹಾಗೂ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿದ್ದರು.

ರಷ್ಯಾ ಉಕ್ರೇನ್​ನ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಆರಂಭಿಸಿದ ಬಳಿಕ ಭಾರತವು ಯುದ್ಧ ಸ್ಥಳದಲ್ಲಿ ಸಿಲುಕಿರುವ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಅಲ್ಲಿಂದ ತಾಯ್ನಾಡಿಗೆ ಕರೆತರುವ ಪ್ರಯತ್ನದಲ್ಲಿದೆ. ಆಪರೇಷನ್​ ಗಂಗಾದ ಅಡಿಯಲ್ಲಿ ಈಗಾಗಲೇ 900ಕ್ಕೂ ಅಧಿಕ ನಾಗರಿಕರು ಉಕ್ರೇನ್​ನಿಂದ ದೇಶಕ್ಕೆ ಮರಳಿದ್ದಾರೆ. ಆದರೆ ಇನ್ನೂ 15 ಸಾವಿರ ಮಂದಿ ಭಾರತೀಯರು ಉಕ್ರೇನ್​ನಲ್ಲಿಯೇ ಸಿಲುಕಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...