ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರಿಗೆ ಎದುರಾಗಿ ಪ್ರಬಲ ಪ್ರಧಾನಿ ಅಭ್ಯರ್ಥಿಗಾಗಿ ಪ್ರತಿಪಕ್ಷಗಳು ಹಲವು ಹೆಸರುಗಳನ್ನು ಹರಿಬಿಡುತ್ತಿರುವುದರ ಮಧ್ಯೆ ಆರ್.ಜೆ.ಡಿ. ನಾಯಕ ತೇಜಸ್ವಿ ಯಾದವ್ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪರ ಬ್ಯಾಟಿಂಗ್ ಮಾಡಿದ್ದಾರೆ.
ಭಾನುವಾರದಂದು ಪಿಟಿಐ ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ಪ್ರತಿಪಕ್ಷಗಳು ಪ್ರಧಾನಿ ಅಭ್ಯರ್ಥಿಯಾಗಿ ನಿತೀಶ್ ಕುಮಾರ್ ಅವರನ್ನು ಪರಿಗಣಿಸಿದರೆ ಅವರೊಬ್ಬ ಪ್ರಬಲ ಅಭ್ಯರ್ಥಿಯಾಗಲಿದ್ದಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಕಳೆದ 50 ವರ್ಷಗಳಿಂದ ಸಾಮಾಜಿಕ ಹಾಗೂ ರಾಜಕೀಯ ರಂಗದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಿತೀಶ್ ಕುಮಾರ್, ದೇಶದ ಜನರ ನಾಡಿಮಿಡಿತವನ್ನು ಬಲ್ಲವರಾಗಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರು ಪ್ರಧಾನಿ ಅಭ್ಯರ್ಥಿಯಾಗುವುದು ಸೂಕ್ತ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.