ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಇನ್ನಿತರೆ ಕಾರಣಗಳಿಂದಾಗಿ ಆಗುವ ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಆರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಈ ಕುರಿತ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.
ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ನೋಂದಣಿ ಮಾಡಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಬ್ಯಾಂಕ್ ಶಾಖೆ, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ ಹಾಗೂ ವಿಮಾ ಸಂಸ್ಥೆಗಳಲ್ಲಿ ನೋಂದಣಿ ಮಾಡಿಸಬಹುದಾಗಿದೆ.
ಈ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಬೆಳೆ ವಿಮೆ ಪರಿಹಾರದ ಮೊತ್ತ ವರ್ಗಾವಣೆಯಾಗುತ್ತದೆ. ಜೊತೆಗೆ ಆಧುನಿಕ ತಂತ್ರಜ್ಞಾನದಿಂದ ಇಳುವರಿಯನ್ನು ಅಂದಾಜಿಸಲಾಗುತ್ತದೆ. ಪ್ರತಿ ವರ್ಷ 5.5 ಕೋಟಿಗಿಂತ ಹೆಚ್ಚಿನ ರೈತರು ಈ ಯೋಜನೆ ಅಡಿ ಭಾಗಿಯಾಗುತ್ತಿದ್ದು, ಈವರೆಗೆ 1.15 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಬೆಳೆ ವಿಮೆ ಪರಿಹಾರ ಮೊತ್ತ ಇತ್ಯರ್ಥವಾಗಿದೆ.