alex Certify ‘ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಇನ್ನಿತರೆ ಕಾರಣಗಳಿಂದಾಗಿ ಆಗುವ ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಆರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಈ ಕುರಿತ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ನೋಂದಣಿ ಮಾಡಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಬ್ಯಾಂಕ್ ಶಾಖೆ, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ ಹಾಗೂ ವಿಮಾ ಸಂಸ್ಥೆಗಳಲ್ಲಿ ನೋಂದಣಿ ಮಾಡಿಸಬಹುದಾಗಿದೆ.

ಈ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಬೆಳೆ ವಿಮೆ ಪರಿಹಾರದ ಮೊತ್ತ ವರ್ಗಾವಣೆಯಾಗುತ್ತದೆ. ಜೊತೆಗೆ ಆಧುನಿಕ ತಂತ್ರಜ್ಞಾನದಿಂದ ಇಳುವರಿಯನ್ನು ಅಂದಾಜಿಸಲಾಗುತ್ತದೆ. ಪ್ರತಿ ವರ್ಷ 5.5 ಕೋಟಿಗಿಂತ ಹೆಚ್ಚಿನ ರೈತರು ಈ ಯೋಜನೆ ಅಡಿ ಭಾಗಿಯಾಗುತ್ತಿದ್ದು, ಈವರೆಗೆ 1.15 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಬೆಳೆ ವಿಮೆ ಪರಿಹಾರ ಮೊತ್ತ ಇತ್ಯರ್ಥವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...