ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ಅವರು ಕಾರ್ಕಳ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ. ಇದರ ಮಧ್ಯೆ ಕಾರ್ಕಳ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಚಿವ ಸುನಿಲ್ ಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಕಾರ್ಕಳ ನನಗೆ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರವಾಗಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಾಳದಿಂದಲೇ ಮತ್ತೆ ಸ್ಪರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ಬೇರೆ ಕ್ಷೇತ್ರಕ್ಕೆ ವಲಸೆ ಹೋಗುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
ಕಾರ್ಕಳದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಅಲ್ಲದೆ ಗೋ ಹತ್ಯೆ ನಿಷೇಧ, ಟಿಪ್ಪು ಜಯಂತಿ ಆಚರಣೆ ರದ್ದು ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.