
ಕಸ್ಟಮ್ಸ್ ಕಮಿಷನರ್ ಕಚೇರಿಯ ಪ್ರಕಾರ, ಐಜಿಐ ವಿಮಾನ ನಿಲ್ದಾಣದ ಟರ್ಮಿನಲ್-3ರಲ್ಲಿ ಪ್ರಯಾಣಿಕನನ್ನು ಬಂಧಿಸಲಾಯಿತು. ಸುಮಾರು 630.45 ಗ್ರಾಂ ತೂಕದ ಚಿನ್ನವನ್ನು ವ್ಯಕ್ತಿಯು ವಿಗ್ ಮತ್ತು ಗುದನಾಳದಲ್ಲಿ ಬಚ್ಚಿಟ್ಟಿದ್ದ. ಕಸ್ಟಮ್ಸ್ ಅಧಿಕಾರಿಗಳು ಆತನ ವಿಗ್ ಅಡಿಯಿಂದ ಚಿನ್ನವನ್ನು ವಶಪಡಿಸಿಕೊಳ್ಳುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ತನ್ನ ತಲೆಗೂದಲನ್ನು ಬೋಳಿಸಿದ ನಂತರ ಚಿನ್ನವನ್ನು ಅವನ ನೆತ್ತಿಯ ಮೇಲೆ ಇಡಲಾಗಿತ್ತು. ಅಧಿಕಾರಿಗಳು ಬಹಳ ಎಚ್ಚರಿಕೆಯಿಂದ ವಿಗ್ ಅನ್ನು ಹೊರತೆಗೆದು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನವರಿಯಲ್ಲಿ, ದುಬೈನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ಪ್ರಯಾಣಿಕನೊಬ್ಬನು, ತನ್ನ ಚರ್ಮದ ಬೆಲ್ಟ್ ಅಡಿಯಲ್ಲಿ ಬಚ್ಚಿಟ್ಟಿದ್ದ ಒಂದು ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನವನ್ನು ಪತ್ತೆಹಚ್ಚಿದ ನಂತರ ಆತನನ್ನು ಬಂಧಿಸಲಾಗಿತ್ತು.