alex Certify ಪ್ರಯಾಣಿಕನ ʼವಿಗ್‍ʼ ನಲ್ಲಿತ್ತು ಬರೋಬ್ಬರಿ 30 ಲಕ್ಷ ರೂ. ಮೌಲ್ಯದ ಚಿನ್ನ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕನ ʼವಿಗ್‍ʼ ನಲ್ಲಿತ್ತು ಬರೋಬ್ಬರಿ 30 ಲಕ್ಷ ರೂ. ಮೌಲ್ಯದ ಚಿನ್ನ…!

ಅಬುಧಾಬಿಯಿಂದ ಆಗಮಿಸಿದ ಪ್ರಯಾಣಿಕನೊಬ್ಬ ತನ್ನ ವಿಗ್‌ನಲ್ಲಿ 30.55 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ಸಂಬಂಧ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಸ್ಟಮ್ಸ್ ಕಮಿಷನರ್ ಕಚೇರಿಯ ಪ್ರಕಾರ, ಐಜಿಐ ವಿಮಾನ ನಿಲ್ದಾಣದ ಟರ್ಮಿನಲ್-3ರಲ್ಲಿ ಪ್ರಯಾಣಿಕನನ್ನು ಬಂಧಿಸಲಾಯಿತು. ಸುಮಾರು 630.45 ಗ್ರಾಂ ತೂಕದ ಚಿನ್ನವನ್ನು ವ್ಯಕ್ತಿಯು ವಿಗ್ ಮತ್ತು ಗುದನಾಳದಲ್ಲಿ ಬಚ್ಚಿಟ್ಟಿದ್ದ. ಕಸ್ಟಮ್ಸ್ ಅಧಿಕಾರಿಗಳು ಆತನ ವಿಗ್ ಅಡಿಯಿಂದ ಚಿನ್ನವನ್ನು ವಶಪಡಿಸಿಕೊಳ್ಳುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ತನ್ನ ತಲೆಗೂದಲನ್ನು ಬೋಳಿಸಿದ ನಂತರ ಚಿನ್ನವನ್ನು ಅವನ ನೆತ್ತಿಯ ಮೇಲೆ ಇಡಲಾಗಿತ್ತು. ಅಧಿಕಾರಿಗಳು ಬಹಳ ಎಚ್ಚರಿಕೆಯಿಂದ ವಿಗ್ ಅನ್ನು ಹೊರತೆಗೆದು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿಯಲ್ಲಿ, ದುಬೈನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯ ಪ್ರಯಾಣಿಕನೊಬ್ಬನು, ತನ್ನ ಚರ್ಮದ ಬೆಲ್ಟ್ ಅಡಿಯಲ್ಲಿ ಬಚ್ಚಿಟ್ಟಿದ್ದ ಒಂದು ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನವನ್ನು ಪತ್ತೆಹಚ್ಚಿದ ನಂತರ ಆತನನ್ನು ಬಂಧಿಸಲಾಗಿತ್ತು.

— ANI (@ANI) April 20, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...