ದೇಶದಲ್ಲಿ ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ಚಟುವಟಿಕೆಗಳು ಆರಂಭವಾಗಿದೆ. ಮನೆಯಿಂದಲೇ ಕಚೇರಿ ಕಾರ್ಯನಿರ್ವಹಿಸುತ್ತಿದ್ದವರು ಸಹ ಇನ್ನು ಮುಂದೆ ಕಚೇರಿಗೆ ತೆರಳಿ ಕಾರ್ಯನಿರ್ವಹಿಸಬೇಕಿದೆ. ಅಲ್ಲದೆ ಶಾಲಾ – ಕಾಲೇಜುಗಳು ಸಹ ಆರಂಭವಾಗಿದೆ.
ಈ ಹಿಂದೆ ಕೊರೊನಾ ಆರ್ಭಟಿಸುತ್ತಿದ್ದ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಲಾಗಿತ್ತಲ್ಲದೆ, ರೈಲು, ಬಸ್, ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಕೊರೊನಾ ಇಳಿಕೆಯಾದ ಹಿನ್ನೆಲೆಯಲ್ಲಿ ಬಸ್ ಸಂಚಾರ ಪೂರ್ಣಪ್ರಮಾಣದಲ್ಲಿ ಆರಂಭವಾಗಿದ್ದರೂ, ರೈಲು ಸಂಚಾರ ಮಾತ್ರ ಪೂರ್ಣಪ್ರಮಾಣದಲ್ಲಿ ಆಗಿರಲಿಲ್ಲ. ರೈಲು ಹಾಗೂ ವಿಮಾನ ಸಂಚಾರ ಕೆಲವೊಂದು ನಿಗದಿತ ಮಾರ್ಗಗಳಲ್ಲಿ ಮಾತ್ರ ನಡೆಯುತ್ತಿತ್ತು.
BIG NEWS: 9 -15 ವರ್ಷದ 30 ಲಕ್ಷ ಬಾಲಕಿಯರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ಲಸಿಕೆ
ಇದೀಗ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಎಲ್ಲ ರೈಲುಗಳ ಸಂಚಾರವನ್ನು ಪುನರಾರಂಭಿಸಲಾಗುತ್ತಿದೆ. ಅಲ್ಲದೆ ಈ ಹಿಂದೆ ನಿಗದಿಪಡಿಸಲಾಗಿದ್ದ ವಿಶೇಷ ದರವನ್ನು ರದ್ದುಪಡಿಸಲಾಗಿದ್ದು, ಈ ಮೊದಲು ಇದ್ದ ದರವನ್ನು ಮುಂದುವರಿಸಲಾಗುತ್ತದೆ. ನವೆಂಬರ್ 18 ರೊಳಗೆ ಎಲ್ಲ ರೈಲುಗಳ ಸಂಚಾರ ಆರಂಭವಾಗಲಿದ್ದು, ಪ್ರಯಾಣಿಕರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.