ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಿಂದಾಗಿ ಘೋಷಿಸಲಾಗಿದ್ದ ಲಾಕ್ ಡೌನ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಪ್ರವಾಸಿ ತಾಣಗಳು ಮುಂದಿನ ವಾರ ಪ್ರವೇಶಕ್ಕೆ ಮುಕ್ತವಾಗಲಿವೆ.
ಶುಕ್ರವಾರದಂದು ಈ ಕುರಿತು ಮಾಹಿತಿ ನೀಡಿರುವ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಪ್ರವಾಸಿ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.
BIG BREAKING: ಮುಷ್ಕರದ ಸುಳಿವು; ಸಾರಿಗೆ ಸಿಬ್ಬಂದಿಗೆ ಬಿಗ್ ಶಾಕ್ ನೀಡಿದ ಸರ್ಕಾರ
ಕೇಂದ್ರ ಪುರಾತತ್ವ ಇಲಾಖೆಯ ತಾಣಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಈಗಾಗಲೇ ಅವಕಾಶ ನೀಡಲಾಗಿದೆ. ಅದೇ ರೀತಿ ರಾಜ್ಯದ ಎಲ್ಲಾ ಪ್ರವಾಸೋದ್ಯಮ ತಾಣಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಜೋಗ ಜಲಪಾತದಲ್ಲಿ 185 ಕೋಟಿ ರೂಪಾಯಿ ವೆಚ್ಚದಲ್ಲಿ ಸುಧಾರಿತ ಪ್ರವಾಸಿ ಸೌಲಭ್ಯ ಕಲ್ಪಿಸಲು ಟೆಂಡರ್ ಪ್ರಕ್ರಿಯೆ ಅಂತಿಮಗೊಂಡಿದ್ದು, ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.