alex Certify ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ; ಸಿಎಂ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ; ಸಿಎಂ ಘೋಷಣೆ

ದೊಡ್ಡಬಳ್ಳಾಪುರ: ಇತ್ತೀಚೆಗೆ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನೌಕರಿ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನಾ ಸಮಾವೇಶದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಭಾಷಣ ಮುಗಿಸಿ ಬಂದು ಆಗಷ್ಟೇ ವೇದಿಕಯ ಮೇಲೆ ಕುಳಿತವರು ಮತ್ತೆ ಎದ್ದು ಹೋಗಿ ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ ನೀಡಲಾಗುವುದು ಎಂದು ಘೋಷಿಸಿದರು.

ಪ್ರವೀಣ್ ನೆಟ್ಟಾರು ಬಿಜೆಪಿ ಕಾರ್ಯಕರ್ತರಾಗಿದ್ದರು. ಇದರಿಂದಾಗಿ ಅವರ ಕುಟುಂಬ ಸದಸ್ಯರಿಗೆ ಕೆಲಸ ಕೊಡಬೇಕಿರುವುದು ನಮ್ಮ ಕರ್ತವ್ಯ. ಸಿಎಂ ಕಚೇರಿಯಲ್ಲಿಯೇ ಕೆಲಸ ನೀಡಲಾಗುವುದು ಎಂದರು.

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...