ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ‘ಯೋಗ ತರಬೇತಿ’ ಪಠ್ಯವನ್ನು ಕಡ್ಡಾಯಗೊಳಿಸಲಾಗಿದ್ದು, ಈ ಕುರಿತು ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ಹೊರಡಿಸಿದೆ.
ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದ್ದು ಅದಕ್ಕೂ ಮುನ್ನವೇ ಅಂದರೆ ಜೂನ್ 12 ರಿಂದ 21 ರವರೆಗೆ ಒಟ್ಟು ಹತ್ತು ದಿನಗಳ ಕಾಲ ಪ್ರತಿದಿನ ಒಂದು ಗಂಟೆಗಳ ಕಾಲ ಯೋಗ ತರಬೇತಿ ನೀಡಲಾಗುತ್ತದೆ.
ಫೌಂಡೇಶನ್ ಕೋರ್ಸ್ ರೂಪದಲ್ಲಿ ಯೋಗ ತರಬೇತಿಯನ್ನು ಪರಿಚಯಿಸಲಾಗಿದ್ದು, ಮುರಾರ್ಜಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಯೋಗ ಸಂಸ್ಥೆಯು ಯೋಗ ತರಬೇತಿ ಕುರಿತ ರೂಪುರೇಷೆಗಳನ್ನು ಈಗಾಗಲೇ ಸಿದ್ಧಪಡಿಸಿ ಕೈಪಿಡಿಯನ್ನು ಬಿಡುಗಡೆ ಮಾಡಿದೆ.