alex Certify ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: 2021-2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕುರಿತು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಶಿಕ್ಷಣ ಇಲಾಖಾ ವೆಬ್‍ಸೈಟ್‍ನಲ್ಲಿ 1:2 ಅನುಪಾತದ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರನ್ವಯ 816 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ತಂಡಗಳನ್ನು ರಚಿಸಿ ಅ.6 ರಿಂದ ಅ.14 ರವರೆಗೆ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿದ ದಿನಾಂಕಗಳಂದು ದಾಖಲೆಗಳ ಪರಿಶೀಲನೆಗೆ ಹಾಜರಾಗಲು ತಿಳಿಸಿದೆ.

ಕಸ್ತೂರ್ಬಾ ಪದವಿಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗ-ಶಿವಮೊಗ್ಗ ಇಲ್ಲಿ ಒಂದು ದಿನಕ್ಕೆ 20 ಅಭ್ಯರ್ಥಿಗಳಂತೆ ದಾಖಲೆ ಪರಿಶೀಲನೆ ನಡೆಸಲಾಗುವುದು.

ಒಟ್ಟು 6 ತಂಡಗಳ ರಚನೆಯಾಗಿದ್ದು ನಿಗದಿಪಡಿಸಿದ ದಿನಾಂಕಗಳಂದು ಅಭ್ಯರ್ಥಿಗಳು ತಮ್ಮ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...