ಪ್ರಾಧ್ಯಾಪಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 1,242 ಪ್ರಾಧ್ಯಾಪಕರ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಸಾಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದರ ಜೊತೆಗೆ ವಿವಿಧ ಸ್ತರದ 6,500 ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಸರ್ಕಾರ 5800 ಕೋಟಿ ರೂ. ಅನುದಾನ ನೀಡುತ್ತಿದ್ದು, ಈ ಪೈಕಿ ಶೇಕಡ 95ರಷ್ಟು ವೇತನಕ್ಕೆ ಖರ್ಚಾಗುತ್ತಿದೆ. ಹೀಗಾಗಿ ಕಾಲೇಜು ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಹೆಚ್ಚಿನ ಅನುದಾನಕ್ಕೆ ಕೋರಲಾಗಿದೆ ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.