ಬೆಂಗಳೂರು: ಪ್ರಾರ್ಥನಾ ಮಂದಿರಗಳಲ್ಲಿ ಮೈಕ್ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸುವಂತೆ ಸೂಚಿಸಿದ್ದಾರೆ.
ಮಸಿದಿಗಳಲ್ಲಿನ ಮೈಕ್ ತೆರವಿಗೆ ಆಗ್ರಹಿಸಿ ಆಜಾನ್ ವಿರುದ್ಧ ದೇವಾಲಯಗಳಲ್ಲಿ ಸುಪ್ರಭಾತ ಅಭಿಯಾನ, ಮಂತ್ರಪಠಣಗಳು ಆರಂಭವಾಗಿದ್ದು, ಈ ನಡುವೆ ಗೃಹ ಸಚಿವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಶಬ್ದಮಾಲಿನ್ಯ ನಿಯಂತ್ರಿಸಲು ಕೋರ್ಟ್ ಆದೇಶವಿದೆ. ಕೋರ್ಟ್ ಆದೇಶವನ್ನು ಎಲ್ಲರೂ ಪಾಲೀಸಬೇಕು. ನ್ಯಾಯಾಲಯದ ಆದೇಶ ಮೀರಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯಲ್ಲ ಎಂದು ಎಚ್ಚರಿಸಿದ್ದಾರೆ.