ತನ್ನ ಪತಿಯನ್ನು ತೊರೆದು ಪ್ರಿಯಕರನ ಜೊತೆ ವಾಸಿಸುತ್ತಿದ್ದ ಗೃಹಿಣಿಯೊಬ್ಬಳು ಆತನೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಧಾರವಾಡ ಮೂಲದ ಸುರಯ್ಯ ಹಾಗೂ ಮೆಹಬೂಬ್ ಸಾವನ್ನಪ್ಪಿದವರಾಗಿದ್ದು, ನಾಲ್ಕು ತಿಂಗಳ ಹಿಂದೆ ಸುರಯ್ಯ ಪತಿಯನ್ನು ತೊರೆದು ಮೆಹಬೂಬ್ ಜೊತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಕೊರಳೂರಿನಲ್ಲಿ ವಾಸಿಸುತ್ತಿದ್ದರು.
ಜೀವನದಲ್ಲಿ ಜಿಗುಪ್ಸೆಗೊಂಡು ಇವರಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ತಿರುಮಲ ಶೆಟ್ಟಿ ಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.