ಬೆಂಗಳೂರು: ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿದ ಪ್ರಕರಣದಲ್ಲಿ ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಿರುವುದು ಖಂಡನೀಯ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮೃತ ರೈತರ ಮನೆಗೆ ಭೇಟಿ ನೀಡದಂತೆ ತಡೆಯಲಾಗಿದೆ. ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ಬಂಧಿಸಿದ್ದಾರೆ. ಪುರುಷ ಪೊಲೀಸರು ಪ್ರಿಯಾಂಕಾ ಗಾಂಧಿಯವರನ್ನು ಎಳೆದಾಡಿದ್ದಾರೆ. ಇದು ದೇಶದ ಪ್ರತಿ ಹೆಣ್ಣು ಮಗುವಿಗೆ ಮಾಡುತ್ತಿರುವ ಅಪಮಾನ. ದೇಶದ ಪ್ರತಿಯೊಬ್ಬರೂ ಇದನ್ನು ಖಂಡಿಸಬೇಕು. ಬೇರೆಲ್ಲೂ ಇಲ್ಲದ ಕಾನೂನು ಉತ್ತರ ಪ್ರದೇಶದಲ್ಲಿ ಮಾತ್ರ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೇಲ್ಸೇತುವೆ ಅಡಿಯಲ್ಲಿ ಸಿಲುಕಿದ ವಿಮಾನ..! ಸ್ಪಷ್ಟನೆ ನೀಡಿದ ಏರ್ ಇಂಡಿಯಾ
ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ವಾಹನ ಹರಿದಿದೆ. ನಾಲ್ವರು ರೈತರು ಮೃತಪಟ್ಟಿದ್ದಾರೆ. ಲಖಿಂಪುರ ಹಿಂಸಾಚಾರದಲ್ಲಿ ಒಟ್ಟು 8 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲ, ಸರ್ವಾಧಿಕಾರ ನಡೆಯುತ್ತಿದೆ ಎಂಬುದಕ್ಕೆ ಇದು ಉದಾಹರಣೆ. ಕೇಂದ್ರ ಸರ್ಕಾರದ ವಿರುದ್ಧ ದೇಶದ ಪ್ರತಿ ಮತದಾರ ದಂಗೆ ಏಳುವುದಕ್ಕೆ ಸಿದ್ಧರಾಗಿದ್ದಾರೆ. ಕೇಂದ್ರ ಸರ್ಕಾರ ಪಾಠ ಕಲಿಯುತ್ತೆ ಎಂಬ ನಂಬಿಕೆ ನಮಗಿಲ್ಲ, ದೇಶದ ಜನರೇ ಸರ್ಕಾರಕ್ಕೆ ಪಾಠ ಕಲಿಸಬೇಕಿದೆ ಎಂದು ಹೇಳಿದರು.
BIG NEWS: ಲಖಿಂಪುರ ಹಿಂಸಾಚಾರ ಪ್ರಕರಣ; ಕೇಂದ್ರ ಸಚಿವರ ಪುತ್ರನ ವಿರುದ್ಧ ಕೊಲೆ ಕೇಸ್ ದಾಖಲು
ದೇಶದಲ್ಲಿ ಅನ್ನದಾತರಿಗೆ ರಕ್ಷಣೆ ಇಲ್ಲದಾಗಿದೆ. ತಮ್ಮ ರಕ್ಷಣೆಗಾಗಿ ಒಂದು ವರ್ಷದಿಂದ ರೈತರು ಹೋರಾಟ ಮಾಡುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ರೈತರ ಬಗ್ಗೆ ಗಮನ ಹರಿಸುತ್ತಿಲ್ಲ. ಈಗ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ಪಡೆ ಕಾರು ಹರಿಸಿ ರೈತರನ್ನು ಸಾಯಿಸಿದ್ದಾರೆ. ರೈತರ ಸಂಕಷ್ಟ ಆಲಿಸಲು ಕಾಂಗ್ರೆಸ್ ನಾಯಕರಿಗೂ ಅವಕಾಶ ನೀಡುತ್ತಿಲ್ಲ. ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ಧ ಸಿಡಿದೇಳಬೇಕಿದೆ. ದೇಶ ರಕ್ಷಣೆಗೆ ನಾವು ಮುಂದಾಗಬೇಕಿದೆ ಎಂದು ಕರೆ ನೀಡಿದ್ದಾರೆ.