ನವದೆಹಲಿ: ಬಿಟ್ ಕಾಯಿನ್ ಕೇಸ್ ನಲ್ಲಿ ಸಿಎಂ ಬಲಿಯಾಗುತ್ತಾರೆ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಿಯಾಂಕ್ ಖರ್ಗೆ ಮಾತಿಗೆಲ್ಲ ನಾನು ರಿಯಾಕ್ಟ್ ಮಾಡಲ್ಲ ಎಂದಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪಾಪ ಪ್ರಿಯಾಂಕ್ ಖರ್ಗೆ ಸಂಪೂರ್ಣವಾಗಿ ಮಾಹಿತಿ ಪಡೆದು ಮಾತನಾಡಲಿ. ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ. ಈ ಬಗ್ಗೆ ಈಗಾಗಲೇ ನಾನು ಹೇಳಿದ್ದೇನೆ. ಕಾಂಗ್ರೆಸ್ ನವರು ಮೊದಲು ಅವರ ನಾಯಕರ ಬಗ್ಗೆ ಚಿಂತನೆ ನಡೆಸಲಿ ಎಂದರು.
BIG NEWS: ದೇಶದ ಮಹಿಳಾ ಬಿಲಿಯೇನರ್ ಪಟ್ಟಿಗೆ ನೈಕಾ ಸಂಸ್ಥಾಪಕಿ ಫಾಲ್ಗುಣಿ ನಾಯರ್ ಸೇರ್ಪಡೆ
ಬಿಟ್ ಕಾಯಿನ್ ಪ್ರಕರಣ ಸಿಎಂ ಬೊಮ್ಮಾಯಿ ಬಲಿ ಪಡೆಯಲಿದೆ. ಸೂಕ್ತವಾಗಿ ತನಿಖೆ ನಡೆಸಿದರೆ ಸರ್ಕಾರದಲ್ಲಿರುವ ಬಿಜೆಪಿ ಪ್ರಭಾವಿ ನಾಯಕರ ಹೆಸರು ಬಹಿರಂಗವಾಗಲಿದೆ. ಬಿಟ್ ಕಾಯಿನ್ ಕೇಸ್ ನಲ್ಲಿ ಬಿಜೆಪಿಯವರು ಭಾಗಿಯಾಗಿದ್ದಾರೆ. ನಮ್ಮ ಬಳಿ ದಾಖಲೆಗಳಿವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದರು.