alex Certify ಪ್ರೀತಿಸಲು ನಿರಾಕರಿಸಿದ್ದಕ್ಕೆ ಹುಡುಗಿ ಜೊತೆಗಿದ್ದ ಫೋಟೋ ಪೋಸ್ಟ್ ಮಾಡಿದ ಯುವಕ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಲು ನಿರಾಕರಿಸಿದ್ದಕ್ಕೆ ಹುಡುಗಿ ಜೊತೆಗಿದ್ದ ಫೋಟೋ ಪೋಸ್ಟ್ ಮಾಡಿದ ಯುವಕ…!

ತನ್ನ ಜೊತೆಗೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹುಡುಗಿಯನ್ನು ಪ್ರೀತಿಸುವಂತೆ ಗಂಟು ಬಿದ್ದಿದ್ದ ಯುವಕನೊಬ್ಬ ಆಕೆ ಇದಕ್ಕೆ ನಿರಾಕರಿಸಿದಳೆಂಬ ಕಾರಣಕ್ಕೆ ತನ್ನ ಜೊತೆಗಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ.

ಇಂಥದೊಂದು ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಭರತ್ ಎಂಬ ಯುವಕ ಮೊಬೈಲ್ ಸರ್ವಿಸ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ. ಯುವತಿಯೂ ಆತನ ಜೊತೆಯಲ್ಲೇ ಕೆಲಸ ಮಾಡುತ್ತಿದ್ದು, ಸಹಜವಾಗಿಯೇ ಜೊತೆಗೆ ಫೋಟೋ ತೆಗೆಸಿಕೊಂಡಿದ್ದಾರೆ.

ಬಳಿಕ ತನ್ನ ವರಸೆ ಆರಂಭಿಸಿದ ಭರತ್ ತನ್ನನ್ನು ಪ್ರೀತಿಸುವಂತೆ ಆಕೆಗೆ ಗಂಟು ಬಿದ್ದಿದ್ದಾನೆ. ಇದಕ್ಕೆ ನಿರಾಕರಿಸಿದಾಗ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ನಕಲಿ ಖಾತೆ ತೆರೆದು ತನ್ನೊಂದಿಗಿದ್ದ ಫೋಟೋಗಳನ್ನು ಪೋಸ್ಟ್ ಮಾಡಿದ್ದಾನೆ. ಇದೀಗ ಯುವತಿ ಆತನ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...