alex Certify ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿಡಿಯೋ ಮಾಡಿ ವಿಷ ಸೇವಿಸಿದ ಪ್ರಿಯಕರ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿಡಿಯೋ ಮಾಡಿ ವಿಷ ಸೇವಿಸಿದ ಪ್ರಿಯಕರ…!

ಪ್ರೀತಿಸುತ್ತಿದ್ದ ಹುಡುಗಿ ಕೊನೆಗೆ ಕುಟುಂಬದ ಕಾರಣ ಹೇಳಿ ಅಂತರ ಕಾಯ್ದುಕೊಂಡಿದ್ದಕ್ಕೆ ಮನನೊಂದ ಯುವಕನೊಬ್ಬ ಆಕೆಯ ಗ್ರಾಮಕ್ಕೆ ತೆರಳಿ ಸೆಲ್ಫಿ ವಿಡಿಯೋ ಮಾಡಿದ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆ ಅರಸೀಕೆರೆಯ ದಿಲೀಪ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಈತ ಬೆಂಗಳೂರಿನ ಗಾರ್ಮೆಂಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ವೇಳೆ ಅದೇ ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯೊಂದಿಗೆ ಪ್ರೀತಿ ಬೆಳೆದಿತ್ತು ಎನ್ನಲಾಗಿದೆ.

ಕೆಲ ವರ್ಷಗಳ ಕಾಲ ಇಬ್ಬರೂ ಒಟ್ಟಿಗೆ ಓಡಾಡಿಕೊಂಡಿದ್ದು, ಆದರೆ ಇತ್ತೀಚೆಗೆ ಯುವತಿ ತನ್ನ ಕುಟುಂಬ ಈ ಪ್ರೀತಿಗೆ ಒಪ್ಪುವುದಿಲ್ಲವೆಂದು ಹೇಳಿ ಯುವಕನಿಂದ ದೂರವಾಗಿದ್ದಳು ಎನ್ನಲಾಗಿದೆ. ಇದರಿಂದ ಮನನೊಂದ ದಿಲೀಪ್ ಯುವತಿ ಗ್ರಾಮಕ್ಕೆ ತೆರಳಿ ಅಲ್ಲಿನ ಕೆರೆ ಏರಿ ಮೇಲೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದಕ್ಕೂ ಮುನ್ನ ಈತ ಸೆಲ್ಫಿ ವಿಡಿಯೋ ಮಾಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...