ತನ್ನನ್ನು ಪ್ರೀತಿಸುವಂತೆ ಯುವತಿ ಹಿಂದೆ ಬಿದ್ದಿದ್ದವನೊಬ್ಬ ಅದಕ್ಕೆ ಆಕೆ ನಿರಾಕರಿಸಿದಳೆಂಬ ಕಾರಣಕ್ಕೆ ಕಾರು ಡಿಕ್ಕಿ ಹೊಡೆಯಿಸಿ ಕೊಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಪ್ರಕರಣದ ವಿವರ: ಬೊಮ್ಮನಾಯಕನಹಳ್ಳಿ ನಿವಾಸಿ ಭರತ್ ಎಂಬಾತ ಶರಣ್ಯಾ ಎಂಬ ಯುವತಿಗೆ ತನ್ನನ್ನು ಪ್ರೀತಿಸುವಂತೆ ಗಂಟು ಬಿದ್ದಿದ್ದ ಎನ್ನಲಾಗಿದೆ. ಆದರೆ ಆಕೆ ಈತನನ್ನು ನಿರ್ಲಕ್ಷಿಸಿದ್ದರು.
ಇದರಿಂದ ಆಕ್ರೋಶಗೊಂಡಿದ್ದ ಭರತ್ ಮೈಸೂರಿನಿಂದ ಮಾರುತಿ ಆಲ್ಟೊ ಕಾರನ್ನು ಬಾಡಿಗೆಗೆ ತಂದು ಯುವತಿ ಕೆಲಸಕ್ಕೆ ಹೋಗುವ ವೇಳೆ ಡಿಕ್ಕಿ ಹೊಡೆಯಿಸಿ ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದ.
ಈ ಅಪಘಾತದಲ್ಲಿ ಶರಣ್ಯಾ ಮೃತಪಟ್ಟಿದ್ದು, ಪ್ರಕರಣ ದಾಖಲಿಸಿಕೊಂಡಿದ್ದ ಹಾಸನ ಬಡಾವಣೆ ಠಾಣೆ ಪೊಲೀಸರು ತನಿಖೆ ಕೈಗೊಂಡ ವೇಳೆ ಪ್ರೀತಿ ನಿರಾಕರಿಸಿದ್ದಕ್ಕೆ ಈ ಕೊಲೆ ನಡೆದಿದೆ ಎಂಬುದು ತಿಳಿದು ಬಂದಿದೆ. ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.