
ವಿ. ಮನೋಹರ್ ನಿರ್ದೇಶನದ ಸತೀಶ್ ನಟನೆಯ ‘ದರ್ಬಾರ್’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಂಡಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಪ್ರೇಕ್ಷಕರಿಂದ ಈ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಕೂಡ ಸಿಕ್ಕಿದೆ. ಆಕ್ಷನ್ ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾಂದರ ಹೊಂದಿರುವ ಈ ಸಿನಿಮಾದಲ್ಲಿ ಸತೀಶ್ ಗೆ ಜೋಡಿಯಾಗಿ ಜಾನವಿ ರಾಜು ಅಭಿನಯಿಸಿದ್ದು, ವಿ. ಮನೋಹರ್ ನಿರ್ದೇಶನದ ಜೊತೆಗೆ ಸಂಗೀತ ಸಂಯೋಜನೆ ನೀಡಿದ್ದಾರೆ.
ಬಿ. ಎನ್. ಶಿಲ್ಪ ನಿರ್ಮಾಣದ ಈ ಚಿತ್ರದಲ್ಲಿ ಸಾಧು ಕೋಕಿಲ ಸೇರಿದಂತೆ ನವೀನ್ ಪಡಿಲ್, ಹುಲಿ ಕಾರ್ತಿಕ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, 23 ವರ್ಷಗಳ ಬಳಿಕ ಖ್ಯಾತ ಸಂಗೀತ ನಿರ್ದೇಶಕ ವಿ. ಮನೋಹರ್ ಈ ಸಿನಿಮಾ ಮೂಲಕ ಮತ್ತೊಮ್ಮೆ ನಿರ್ದೇಶನಕ್ಕಿಳಿದಿದ್ದಾರೆ.

