alex Certify ಪ್ರೇಮಿಗಳಿಗೆ ಮದುವೆ ಮಾಡಿಸಿದ್ದೇ ತಪ್ಪಾಯ್ತು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಮಿಗಳಿಗೆ ಮದುವೆ ಮಾಡಿಸಿದ್ದೇ ತಪ್ಪಾಯ್ತು….!

ರಾಜಸ್ಥಾನದ ಬಾರ್ಮರ್ ನಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಪಂಚಾಯತ್ ಇಬ್ಬರು ಸಹೋದರರಿಗೆ 34 ಲಕ್ಷ ರೂಪಾಯಿ ದಂಡ ವಿಧಿಸಿದೆ. ಇಬ್ಬರು, ಸಂಬಂಧಿ ಪ್ರೇಮ ವಿವಾಹಕ್ಕೆ ನೆರವಾಗಿದ್ದರು ಎನ್ನಲಾಗಿದೆ.

ಮಾನವ ಹಕ್ಕುಗಳ ಆಯೋಗ ಈ ಬಗ್ಗೆ ತನಿಖೆ ನಡೆಸುತ್ತಿದೆ. ಪೊಲೀಸರು ಕೂಡ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸೋದರ ಸಂಬಂಧಿ ಮಗಳು ಕೆಲ ದಿನಗಳ ಹಿಂದೆ ಪ್ರೇಮ ವಿವಾಹವಾಗಿದ್ದಳು. ಆಕೆ ಪ್ರೇಮ ವಿವಾಹಕ್ಕೆ ಇಬ್ಬರು ಸಹೋದರರು ಸಹಾಯ ಮಾಡಿದ್ದಾರೆ ಎನ್ನಲಾಗಿದೆ. ಆದ್ರೆ ಸಹೋದರರು ಇದನ್ನು ತಳ್ಳಿ ಹಾಕಿದ್ದಾರೆ. ತಾವು ಯಾವುದೇ ರೀತಿಯ ಸಹಾಯ ಮಾಡಿಲ್ಲ ಎಂದಿದ್ದಾರೆ.

ಪಂಚಾಯತಿ, ಇಬ್ಬರು ಸಹೋದರರಿಗೆ ತಲಾ 17 ಲಕ್ಷ ಪಾವತಿ ಮಾಡುವಂತೆ ಹೇಳಿದೆ. ಒಂದು ವೇಳೆ ಹಣ ನೀಡದೆ ಹೋದಲ್ಲಿ ಬಹಿಷ್ಕಾರ ಹಾಕುವುದಾಗಿ ಎಚ್ಚರಿಸಿದೆ. ಪ್ರಕರಣದ ಬಗ್ಗೆ ವಿಚಾರಣೆ ನಡೆಯುತ್ತಿದೆ. ಐದು ಜನರ ವಿರುದ್ಧ ದೂರು ದಾಖಲಾಗಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...