ಈ ಬಾರಿಯ 10 ನೇ ತರಗತಿ ಪರೀಕ್ಷೆ ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ರಾಜ್ಯದ 3,305 ಕೇಂದ್ರಗಳಲ್ಲಿ ಸುಗಮವಾಗಿ ನಡೆದಿತ್ತು. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಇದೀಗ ಫಲಿತಾಂಶದ ನಿರೀಕ್ಷೆಯಲ್ಲಿ ಇದ್ದಾರೆ.
ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಒಂದು ಇಲ್ಲಿದ್ದು, ಮೌಲ್ಯಮಾಪನ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಅಂಕಗಳ ಕೂಡುವಿಕೆ ಕಾರ್ಯ ನಡೆಯುತ್ತಿದ್ದು, ಇದಾದ ಬಳಿಕ ಅತಿ ಶೀಘ್ರದಲ್ಲೇ ಫಲಿತಾಂಶ ಪ್ರಕಟವಾಗಲಿದೆ.
ಇದರ ಮಧ್ಯೆ ಮೌಲ್ಯಮಾಪನ ಕಾರ್ಯದಲ್ಲಿ ಪಾಲ್ಗೊಂಡಿದ್ದ ಶಿಕ್ಷಕರುಗಳು ಮಹತ್ವದ ಸಲಹೆ ಒಂದನ್ನು ನೀಡಿದ್ದು, ವಿದ್ಯಾರ್ಥಿಗಳಿಗೆ ನೀಡಲಾಗಿದ್ದ 24 ಪುಟಗಳ ಬುಕ್ ಲೆಟ್ ನಲ್ಲಿ ಶೇಕಡಾ 85ರಷ್ಟು ವಿದ್ಯಾರ್ಥಿಗಳು 15 ಪುಟಗಳನ್ನು ಸಹ ಬಳಸಿಕೊಂಡಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ಬುಕ್ ಲೆಟ್ ಪುಟಗಳ ಸಂಖ್ಯೆ 15ಕ್ಕೆ ಇಳಿಸಿ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಹಾಳೆಗಳನ್ನು ನೀಡಬೇಕೆಂದು ತಿಳಿಸಿದ್ದಾರೆ.