
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಸಿನಿಮಾ ಮಾರ್ಚ್ 17ರಂದು ಸುಮಾರು ಏಳು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಸಿನಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಇದಕ್ಕೂ ಮುಂಚೆ ಚಿತ್ರ ತಂಡ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಇದೇ ತಿಂಗಳು ಫೆಬ್ರವರಿ 26ರಂದು ಶಿಡ್ಲಘಟ್ಟದಲ್ಲಿ ನೆರವೇರಿಸುವುದಾಗಿ, ಚಿತ್ರತಂಡ ಇಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ.
ಆರ್ ಚಂದ್ರು ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ, ಕಿಚ್ಚ ಸುದೀಪ್ ಸೇರಿದಂತೆ ಮುರುಳಿ ಶರ್ಮ, ಶ್ರೀಯ ಸರನ್, ಕೋಟ ಶ್ರೀನಿವಾಸರಾವ್, ಪ್ರಮೋದ್ ಶೆಟ್ಟಿ, ಸುಧಾ, ಉಗ್ರಂ ಮಂಜು, ಅವಿನಾಶ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಭಾರತದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ
