ಫೆಬ್ರವರಿ 27ಕ್ಕೆ ಶಿವಮೊಗ್ಗ – ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕರ್ನಾಟಕದಲ್ಲಿ ಅಧಿಕಾರಕ್ಕೇರಬೇಕೆಂಬ ಕಾರಣಕ್ಕೆ ಬಿಜೆಪಿ ಕೇಂದ್ರ ನಾಯಕರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಸಮಾವೇಶಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಫೆಬ್ರವರಿ 23ರಂದು ರಾಜ್ಯಕ್ಕೆ ಗೃಹ ಸಚಿವ ಅಮಿತ್ ಷಾ ಭೇಟಿ ನೀಡುತ್ತಿದ್ದು, ಬಳ್ಳಾರಿ ಹಾಗೂ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಅದಾದ ಬಳಿಕ ಅಂದರೆ ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಶಿವಮೊಗ್ಗದಲ್ಲಿ ನೂತನ ವಿಮಾನ ನಿಲ್ದಾಣ ಉದ್ಘಾಟನೆ ನೆರವೇರಿಸಲಿರುವ ನರೇಂದ್ರ ಮೋದಿಯವರು ಬಳಿಕ ಬೆಳಗಾವಿಗೆ ತೆರಳಿ ಹೈಟೆಕ್ ರೈಲು ನಿಲ್ದಾಣದ ಉದ್ಘಾಟನೆಯನ್ನು ಮಾಡಲಿದ್ದಾರೆ. ಇದರ ಜೊತೆಗೆ ಬೆಳಗಾವಿಯಲ್ಲಿ ಬೃಹತ್ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read