alex Certify ಫೆ.11ರಂದು ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆ.11ರಂದು ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ಟೀಸರ್ ರಿಲೀಸ್

ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಸಾಕಷ್ಟು ಸಿನಿಮಾಗಳ ಟೀಸರ್ ಹಾಡನ್ನು ಹಾಡುಗಳು ಬಿಡುಗಡೆಯಾಗಿ ಸಖತ್ ಸೌಂಡ್ ಮಾಡುತ್ತಿವೆ. ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯಿಸಿದ್ದ ‘ಜೇಮ್ಸ್’ ಚಿತ್ರದ ಟೀಸರ್ ಫೆಬ್ರವರಿ 11ರಂದು ಬೆಳಿಗ್ಗೆ 11ಕ್ಕೆ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾವನ್ನು ಕಿಶೋರ್ ನಿರ್ಮಾಣ ಮಾಡಿದ್ದಾರೆ.

ಜೇಮ್ಸ್ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಸೇರಿದಂತೆ ಪ್ರಿಯಾ ಆನಂದ್, ಅನು ಪ್ರಭಾಕರ್ ಹಾಗೂ ಶ್ರೀಕಾಂತ್ ಆದಿತ್ಯ ಮೆನನ್, ಸಾಧು ಕೋಕಿಲ, ಚಿಕ್ಕಣ್ಣ ಸೇರಿದಂತೆ ಹಲವಾರು ಕಲಾವಿದರು ಬಣ್ಣ ಹಚ್ಚಿದ್ದಾರೆ. ಯುಟ್ಯೂಬ್ ನಲ್ಲಿ ಧೂಳೆಬ್ಬಿಸಲು ಈ ಟೀಸರ್ ಸಜ್ಜಾಗಿದೆ. 5 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಫ್ಲ್ಯಾನ್ ಮಾಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...