ಸಾಮಾಜಿಕ ಜಾಲತಾಣ ಫೇಸ್ಬುಕ್ಕಿನಲ್ಲಿ ತನ್ನ ಫ್ರೆಂಡ್ ರಿಕ್ವೆಸ್ಟ್ ಅಂಗೀಕರಿಸಲು ನಿರಾಕರಿಸಿದ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ 16 ವರ್ಷದ ಬಾಲಕಿಯನ್ನು ಹತ್ಯೆಗೈದಿದ್ದಾನೆ.
ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ ನಡೆದಿದ್ದು, ರವಿ ಎಂಬ ಯುವಕ ತನ್ನ ಪರಿಚಯವಿದ್ದ ಬಾಲಕಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದ ಎನ್ನಲಾಗಿದೆ. ಆದರೆ ಆಕೆ ಇದನ್ನು ಅಂಗೀಕರಿಸಿರಲಿಲ್ಲ.
ಈತ ಲಗ್ನಪತ್ರಿಕೆ ನೀಡುವ ನೆಪದಲ್ಲಿ ಬಾಲಕಿ ಮನೆಗೆ ಬಂದಿದ್ದು, ಈ ವೇಳೆ ಬಾಲಕಿಗೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಬಳಿಕ ಆಕೆಯ ತಾಯಿ ಮೇಲೆ ಹಲ್ಲೆ ನಡೆಸಿ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ.