ಕೊರೊನಾ ಕಾರಣದಿಂದ ತರಗತಿಗಳು ವಿಳಂಬವಾಗಿ ಆರಂಭವಾಗಿದ್ದು, ಅಲ್ಲದೆ ಬಹುತೇಕ ತರಗತಿಗಳು ಆನ್ಲೈನ್ನಲ್ಲಿ ನಡೆದಿರುವುದು ಸೇರಿದಂತೆ ಅನೇಕ ಕಾರಣಗಳಿಂದಾಗಿ ಫೆಬ್ರವರಿಯಲ್ಲಿ ನಿಗದಿಯಾಗಿದ್ದ ಅಂತಿಮ ವರ್ಷದ ವೈದ್ಯ ಪರೀಕ್ಷೆಯನ್ನು ಮುಂದೂಡುವಂತೆ ಸಚಿವ ಸುಧಾಕರ್ ಸೂಚಿಸಿದ್ದಾರೆ.
ಈ ಕುರಿತು ಸಚಿವ ಡಾ. ಸುಧಾಕರ್, ರಾಜೀವ್ ಗಾಂಧಿ ಆರೋಗ್ಯ ವಿವಿ ಕುಲಪತಿ ಅವರಿಗೆ ಪತ್ರ ಬರೆದಿದ್ದು, ಕೊರೊನಾದಿಂದಾಗಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ತರಗತಿ ಆರಂಭವಾಗಿದೆ. ಜೊತೆಗೆ ಜುಲೈವರೆಗೆ ಆನ್ಲೈನ್ ಮೂಲಕ ತರಗತಿಗಳು ನಡೆದಿದ್ದು, ಅಲ್ಲದೆ ಅಂತಿಮ ವರ್ಷದ ವಿದ್ಯಾರ್ಥಿಗಳು ಎರಡು ತಿಂಗಳ ಕಾಲ ಕರ್ತವ್ಯವನ್ನು ಸಹ ನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲದೆ ಅಗತ್ಯವಿದ್ದಷ್ಟು ಕ್ಲಿನಿಕಲ್ ಪೋಸ್ಟಿಂಗ್ ಸಹ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಡೆದಿರುವುದಿಲ್ಲ. ಹೀಗಾಗಿ ಫೆಬ್ರವರಿಯಲ್ಲಿ ನಡೆಯಬೇಕಿದ್ದ ಅಂತಿಮ ವರ್ಷದ ವೈದ್ಯ ಪರೀಕ್ಷೆ ಮುಂದೂಡುವಂತೆ ಸಚಿವ ಡಾ. ಸುಧಾಕರ್ ಸೂಚಿಸಿದ್ದಾರೆ.