ಖ್ಯಾತ ಬಾಲಿವುಡ್ ನಟ ರಣವೀರ್ ಸಿಂಗ್ ನಿಯತಕಾಲಿಕೆಯೊಂದರ ಫೋಟೋ ಶೂಟ್ ಗಾಗಿ ಬೆತ್ತಲಾಗಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಕುರಿತು ಪರ – ವಿರೋಧದ ಅಭಿಪ್ರಾಯಗಳ ನಡುವೆ ಇದೀಗ ರಣವೀರ್ ಸಿಂಗ್ ಗೆ ಸಂಕಷ್ಟ ಎದುರಾಗಿದೆ.
ಹೌದು, ಮುಂಬೈ ಉಪನಗರ ಮೂಲದ ಸ್ವಯಂ ಸೇವಾ ಸಂಸ್ಥೆಯ ಕಾರ್ಯಕರ್ತರೊಬ್ಬರು ರಣವೀರ್ ಸಿಂಗ್ ವಿರುದ್ಧ ಚೆಂಬೂರು ಪೊಲೀಸರಿಗೆ ದೂರು ನೀಡಿದ್ದು, ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ರಣವೀರ್ ಸಿಂಗ್ ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ರಣವೀರ್ ಸಿಂಗ್ ತಮ್ಮ ನಗ್ನ ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿರುವುದರ ಜೊತೆಗೆ ಅವರ ಘನತೆಗೆ ಕುಂದುಂಟಾಗುವಂತೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದು, ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು, ಈವರೆಗೆ ಎಫ್ಐಆರ್ ದಾಖಲಿಸಿಲ್ಲ ವಿವರ ಕಲೆ ಹಾಕುತ್ತಿದ್ದೇವೆ ಎಂದಿದ್ದಾರೆ.