ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಸತತ ಎರಡನೇ ದಿನವೂ ವಿಚಾರಣೆಗೊಳಪಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬಂಧನದ ಭೀತಿ ಎದುರಾಗಿದೆ. ಸೋಮವಾರದಂದು 10 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದೂ ಕೂಡ ವಿಚಾರಣೆ ಮುಂದುವರಿಸಿದ್ದಾರೆ.
ಇದರ ಮಧ್ಯೆ ರಾಹುಲ್ ಗಾಂಧಿಯವರ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ದೇಶದಾದ್ಯಂತ ಪ್ರತಿಭಟನೆಯನ್ನು ನಡೆಸಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇದು ಮುಗಿಲುಮುಟ್ಟಿದೆ. ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದು, ಪ್ರತಿಭಟನಾ ನಿರತರನ್ನು ಚದುರಿಸಲು ಪ್ರಯತ್ನ ನಡೆಸಿದ್ದಾರೆ.
ಬಸ್ ಅಡಿಯಲ್ಲಿ ಸಿಲುಕುತ್ತಿದ್ದ ಪುಟ್ಟ ಮಗುವಿನ ಪ್ರಾಣ ರಕ್ಷಿಸಿದ ಸೂಪರ್ ಕಾಪ್: ರಿಯಲ್ ಹೀರೋ ಅಂದ ನೆಟ್ಟಿಗರು
ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧನಕ್ಕೊಳಪಡಿಸಬಹುದೆಂಬ ಮಾತುಗಳು ಕೇಳಿಬರುತ್ತಿದ್ದು, ಹೀಗಾಗಿಯೇ ಇಡಿ ಕಚೇರಿ ಸುತ್ತಮುತ್ತಲೂ 144ನೇ ಸೆಕ್ಷನ್ ವಿಧಿಸಲಾಗಿದೆ. ಪೊಲೀಸರು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದ್ದಾರೆ.