ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಂದು ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವಸ್ಥಾನ ಮತ್ತು ಗಲಭೆ ಪ್ರದೇಶಗಳಿಗೆ ಭೇಟಿ ನೀಡಿದರು. ನಂತರ ಮಾಧ್ಯಮದವರೊಡನೆ ಅವರು ಮಾತನಾಡಿದ್ದಾರೆ.
ಹುಬ್ಬಳ್ಳಿ ಗಲಭೆಗೆ ಪ್ರಚೋದನೆ ನೀಡಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ ಹಾಗೂ ಮುಖಂಡ ಅಲ್ತಾಫ್ ಕಿತ್ತೂರ ಮತ್ತು ಘಟನೆ ಸಂಬಂಧ ಬಂಧಿತರಾಗಿರುವವರ ವಿರುದ್ಧ ಕೋಕಾ ಕಾಯ್ದೆ ಜಾರಿಗೊಳಿಸಬೇಕು ಎಂದು ಪ್ರಮೋದ್ ಮುತಾಲಿಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಗಲಭೆಯಲ್ಲಿ ಸಾವಿರಕ್ಕೂ ಹೆಚ್ಚು ಮುಸ್ಲಿಮ್ ಯುವಕರು ಪಾಲ್ಗೊಂಡಿದ್ದು ಎಲ್ಲರನ್ನೂ ಪೊಲೀಸರು ಬಂಧಿಸಬೇಕು. ನಗರದ ವಿವಿಧ ಭಾಗಗಳಿಂದ ಜನರು ಆಗಮಿಸಿದ್ದು ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಪೊಲೀಸರು ದೊಡ್ಡ ಅಪಾಯವನ್ನು ತಪ್ಪಿಸಿ ಗಲಭೆಯನ್ನು ನಿಯಂತ್ರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕಾಶ್ಮೀರದ ರೀತಿಯಲ್ಲಿ ಇಲ್ಲೂ ಸಹ ಭಯ ಸೃಷ್ಟಿಸುವ ಹುನ್ನಾರ ಇದಾಗಿದ್ದು, ಕಲ್ಲು ತೂರಾಟ ಘಜ್ನಿ ಮನಃಸ್ಥಿತಿಯನ್ನು ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.