
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ 7 ಜನರನ್ನು ಬಂಧಿಸಲಾಗಿದೆ. ಇಬ್ಬರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಖಚಿತವಾಗಿದೆ. 12 ಜನರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಹತ್ಯೆಗೆ ಕಾರಣದ ಬಗ್ಗೆ ಎಸ್ಪಿ, ಐಜಿಪಿ ಜೊತೆ ಚರ್ಚಿಸಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಮಾಹಿತಿ ನೀಡಿದ್ದಾರೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಜನರ ಮೇಲೆ ನಿಗಾ ವಹಿಸಲಾಗಿದೆ. ಮೊದಲು ಪರಿಸ್ಥಿತಿ ಹತೋಟಿಗೆ ಬರಬೇಕಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.
ಹಾನಿಗೀಡಾದ ವಾಹನಗಳ ಗುರುತಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.