ಬೆಂಗಳೂರು: ಹಲವು ಕಾರಣಗಳಿಂದ ಬಡ ಕುಟುಂಬದವರ ಬಿಪಿಎಲ್ ಕಾರ್ಡ್ ರದ್ದಾಗಿದ್ದು, ಅನೇಕರ ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡ್ ಗೆ ಬದಲಾವಣೆ ಮಾಡಿಕೊಡಲಾಗಿದೆ. ಇದರಿಂದಾಗಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಡೆಯುತ್ತಿದ್ದ ಪಿಂಚಣಿ ರದ್ದಾಗಿದೆ. ಲಕ್ಷಾಂತರ ಜನರಿಗೆ ಸಂಕಷ್ಟ ಎದುರಾಗಿದೆ.
ಬಡವರಿಗಾಗಿ ಜಾರಿಗೆ ತಂದಿರುವ ಸಾಮಾಜಿಕ ಭದ್ರತಾ ಯೋಜನೆಗಳು ದುರುಪಯೋಗ ಆಗುತ್ತಿದೆ ಎಂಬ ಕಾರಣಕ್ಕೆ ಸರ್ಕಾರ ಕಠಿಣ ನಿಯಮ ರೂಪಿಸಿದೆ. ಪಿಂಚಣಿ ಪಡೆಯುವವರ ಆದಾಯ 38 ಸಾವಿರ ರೂಪಾಯಿಗಿಂತ ಒಳಗಿರಬೇಕು. ಇನ್ನೂ ಕೆಲವರು ಸುಳ್ಳು ಮಾಹಿತಿ ನೀಡಿ ಅರ್ಹತೆ ಇಲ್ಲದಿದ್ದರೂ, ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಆಹಾರ ಇಲಾಖೆ ಪರಿಶೀಲನೆ ಸಂದರ್ಭದಲ್ಲಿ ಅಂತಹ ಅನೇಕ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ಅನೇಕ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಗೆ ಬದಲಾವಣೆ ಮಾಡಿದ್ದು, ಇದರಿಂದಾಗಿ ಪಿಂಚಣಿ ಕೂಡ ರದ್ದಾಗಿದೆ. ಹಿರಿಯ ನಾಗರಿಕರು ಸೇರಿದಂತೆ ಲಕ್ಷಾಂತರ ಜನರಿಗೆ ಸಮಸ್ಯೆ ಎದುರಾಗಿದೆ ಎಂದು ಹೇಳಲಾಗಿದೆ.
ಸರ್ಕಾರದ ನಿರ್ದೇಶನದನ್ವಯ ಬಿಪಿಎಲ್ ಕಾರ್ಡುದಾರರ ಹೊರತಾಗಿ ಉಳಿದವರ ಪಿಂಚಣಿಗೆ ಬ್ರೇಕ್ ಹಾಕಲಾಗಿದೆ. ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಪಡೆಯಲು ವಾರ್ಷಿಕ ಆದಾಯ 38 ಸಾವಿರ ರೂ.ಗಿಂತ ಕಡಿಮೆ ಇರಬೇಕು. ಈ ಹಿನ್ನಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ.
ಅರ್ಹತೆ ಇದ್ದರೂ, ಕೆಲವು ಬಿಪಿಎಲ್ ಕಾರ್ಡ್ ದಾರರನ್ನು ಎಪಿಎಲ್ ಗೆ ವರ್ಗಾಯಿಸಲಾಗಿದೆ. ಇದರಿಂದಾಗಿ ಅನೇಕರ ಹಿರಿಯ ವೃದ್ಧಾಪ್ಯ ವೇತನ, ವಿಧವಾ ವೇತನ ಪಿಂಚಣಿ ಕೂಡ ಇಲ್ಲವಾಗಿದ್ದು, ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಲಾಗಿದೆ.