alex Certify ‘ಬನಾರಸ್’ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬನಾರಸ್’ ಟ್ರೈಲರ್ ರಿಲೀಸ್

ಜಯತೀರ್ಥ ನಿರ್ದೇಶನದ ಬಹುನಿರೀಕ್ಷಿತ ‘ಬನಾರಸ್ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇನ್ನೇನು ಬಿಡುಗಡೆಗೆ ಸಿದ್ಧವಾಗಿದೆ. ನಿನ್ನೆಯಷ್ಟೇ ಈ ಸಿನೆಮಾ ಟ್ರೈಲರ್ ಲಹರಿ ಮ್ಯೂಸಿಕ್ ಮತ್ತು ಟಿ ಸಿರೀಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ವೀಕ್ಷಣೆ ಹಾಗೂ ಲೈಕ್ಸ್ ಪಡೆಯುವ ಮೂಲಕ ಪ್ರೇಕ್ಷಕರ ಗಮನ ಸೆಳೆದಿದೆ.

ಝೈದ್ ಖಾನ್ ಹಾಗೂ ‘ರಾಬರ್ಟ್’ ಖ್ಯಾತಿಯ ಸೋನಾಲ್ ಮೊಂಟೆರೋ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಎನ್ ಕೆ ಪ್ರೊಡಕ್ಷನ್ಸ್ ಬ್ಯಾನರ್ ನಡಿ ತಿಲಕ್ ರಾಜ್ ಬಲ್ಲಾಳ್ ನಿರ್ಮಾಣ ಮಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರ ಸಂಗೀತ ಈ ಚಿತ್ರಕ್ಕಿದೆ. ನವೆಂಬರ್‌ 4ರಂದು ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಹಾಗೂ ಹಿಂದಿ ಭಾಷೆಯಲ್ಲಿ ಈ ಸಿನಿಮಾ ತೆರೆ ಕಾಣಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...