ಮುಂಬರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ಕಾವೇರಿದ್ದು, ದಿನಾಂಕ ನಿಗದಿಯಾದ ಬಳಿಕ ಇದು ಮತ್ತಷ್ಟು ಚುರುಕುಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಮೇ 13ರಂದು ಫಲಿತಾಂಶ ಹೊರಬೀಳಲಿದೆ.
ಇದರ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರೆದಿಟ್ಟುಕೊಳ್ಳಿ ನೂರಕ್ಕೆ ನೂರರಷ್ಟು ನಾವೇ ಅಧಿಕಾರಕ್ಕೆ ಬರುತ್ತೇವೆ. ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದ್ದೇವೆ ಎಂದು ತಿಳಿಸಿದ್ದಾರೆ.
ಸಮೀಕ್ಷೆಗಳು ನಡೆಯುತ್ತಿವೆ. ಇನ್ನೂ ಒಂದೂವರೆ ತಿಂಗಳು ಸಮಯವಿದೆ. ಅಲ್ಲದೆ ಎಲ್ಲ ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿ ಇಲ್ಲ ಎಂದು ಹೇಳಿದ ಮುಖ್ಯಮಂತ್ರಿಗಳು, ವರುಣಾ ಕ್ಷೇತ್ರದಲ್ಲಿಯೂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರಬಲ ಪೈಪೋಟಿ ನೀಡುತ್ತದೆ ಎಂದರು.