ಧಾರವಾಡ ಜಿಲ್ಲೆ ಕಲಘಟಗಿ ತಾಲೂಕು ಆಡಳಿತ, ರೇಣುಕಾಚಾರ್ಯ ಜಯಂತಿಯನ್ನು ಆಚರಿಸಿದ್ದು, ಈ ವೇಳೆ ಕೆಲವರು ಬರ್ಮುಡಾ ಧರಿಸಿದ್ದರು. ಇದರಿಂದ ಆಕ್ರೋಶಿತರಾದ ವೀರಶೈವ ಸಮಾಜದ ಮುಖಂಡರು, ಕಾಟಾಚಾರಕ್ಕೆ ರೇಣುಕಾಚಾರ್ಯ ಜಯಂತಿ ಆಚರಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು.
ರೇಣುಕಾಚಾರ್ಯ ಜಯಂತಿ ಆಚರಣೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಈ ಪ್ರತಿಭಟನೆ ನಡೆದಿದ್ದು, ಎತ್ತಿನ ಮಠದ ಪೀಠಾಧಿಪತಿ ಇದರ ನೇತೃತ್ವ ವಹಿಸಿದ್ದರು.
ಈ ಸಂದರ್ಭದಲ್ಲಿ ಸ್ಥಳಕ್ಕೆ ತಹಶೀಲ್ದಾರ್ ಯಲ್ಲಪ್ಪ ಗೋಣೆನ್ನನವರ್ ಭೇಟಿ ನೀಡಿದ್ದು, ಪ್ರತಿಭಟನಾಕಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಆಗ ತಮ್ಮ ತಪ್ಪಿನ ಅರಿವಾದ ತಹಶೀಲ್ದಾರ್ ಶ್ರೀಗಳ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ್ದಾರಲ್ಲದೆ ಮತ್ತೊಮ್ಮೆ ಅದ್ದೂರಿಯಾಗಿ ರೇಣುಕಾಚಾರ್ಯ ಜಯಂತಿ ಆಚರಿಸುವುದಾಗಿ ಭರವಸೆ ನೀಡಿದ್ದಾರೆ.