ಚೆನ್ನೈನ ನೆಹರೂ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಮ್ಮ ಮೇಲೆ ಬಲವಂತವಾಗಿ ಹಿಂದಿ ಭಾಷೆಯನ್ನು ಬರಬೇಡಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
ಪ್ರಧಾನಿಯವರೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಹಿಂದಿ ಭಾಷೆ ಏರಿಕೆ ವಿರೋಧಿಸಿ ಹೇಳಿಕೆ ನೀಡಿದ್ದಾರೆ. ತಮಿಳು ಭಾಷೆಯೇ ನಮಗೆ ಅಧಿಕೃತ ಭಾಷೆ. ನೀಟ್ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಪ್ರಧಾನಮಂತ್ರಿಯವರ ಸಮ್ಮುಖದಲ್ಲಿ ಮಾತನಾಡಿದ ಎಂ.ಕೆ. ಸ್ಟಾಲಿನ್, ತಮಿಳು ಭಾಷೆಯನ್ನು ಹಿಂದಿಯಂತೆ ಅಧಿಕೃತ ಭಾಷೆಯನ್ನಾಗಿ ಮಾಡಿ. ಹಿಂದಿಗೆ ಸಮಾನವಾಗಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಒತ್ತಾಯಿಸಿದ್ದಾರೆ.
ಇತ್ತೀಚೆಗೆ ರಾಜ್ಯ ವಿಧಾನಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿದಂತೆ ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ NEET ನಿಂದ ತಮಿಳುನಾಡಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದಾರೆ.