alex Certify ಬಳೆ, ಕುಂಕುಮ, ಮಠ-ಮಂದಿರಗಳ ಬಗ್ಗೆ ಮಾತನಾಡಿದರೆ ನಾಲಿಗೆ ಸೀಳ್ತೀವಿ: ಪ್ರಮೋದ್ ಮುತಾಲಿಕ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಳೆ, ಕುಂಕುಮ, ಮಠ-ಮಂದಿರಗಳ ಬಗ್ಗೆ ಮಾತನಾಡಿದರೆ ನಾಲಿಗೆ ಸೀಳ್ತೀವಿ: ಪ್ರಮೋದ್ ಮುತಾಲಿಕ್ ಎಚ್ಚರಿಕೆ

ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಇನ್ನೂ ಮುಂದುವರಿದಿದೆ. ಸದ್ಯ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದು, ಅಂತಿಮ ತೀರ್ಪು ಹೊರ ಬೀಳುವವರೆಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕತೆ ಬಿಂಬಿಸುವ ಉಡುಪು ಧರಿಸುವಂತಿಲ್ಲ ಎಂದು ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ.

ಇದರ ಮಧ್ಯೆಯೂ ಕೆಲ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದು, ಅವರುಗಳಿಗೆ ತರಗತಿ ಪ್ರವೇಶಿಸಲು ಅವಕಾಶ ಸಿಕ್ಕಿಲ್ಲ. ಆದರೆ ಕುಂಕುಮ, ಬಳೆ ಧರಿಸಿಕೊಂಡು ಬರುವ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಿಸಲು ಅನುಮತಿ ನೀಡಲಾಗುತ್ತಿದೆಯಲ್ಲ ಎಂದು ಕೆಲವರು ಪ್ರಶ್ನಿಸಿದ್ದಾರೆ.

ಈ ಕುರಿತು ಬಾಗಲಕೋಟೆಯಲ್ಲಿ ಮಾತನಾಡಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಕುಂಕುಮ, ವಿಭೂತಿ ಹಚ್ಚಿಕೊಳ್ಳುವುದರ ಹಿಂದೆ ವೈಜ್ಞಾನಿಕ ಕಾರಣಗಳಿವೆ. ಅಲ್ಲದೆ ಇದು ಈ ದೇಶದ ಸಂಸ್ಕೃತಿ, ಸಂಪ್ರದಾಯವಾಗಿದ್ದು ಇವುಗಳ ಬಗ್ಗೆ ಮಾತನಾಡಿದರೆ ನಾಲಿಗೆ ಸೀಳಬೇಕಾಗುತ್ತದೆ ಹುಷಾರ್ ಎಂದು ಎಚ್ಚರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...