alex Certify ಬಸ್ ಗಳ ಮಧ್ಯೆ ಭೀಕರ ಅಪಘಾತ; ಐವರ ಸಾವು, ಹಲವರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಗಳ ಮಧ್ಯೆ ಭೀಕರ ಅಪಘಾತ; ಐವರ ಸಾವು, ಹಲವರ ಸ್ಥಿತಿ ಗಂಭೀರ

ಬಸ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿ ಹಾಗೂ ಹರಿಯಾಣದ ಅಂಬಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಎರಡು ಬಸ್ ಗಳು ದೆಹಲಿಯತ್ತ ಹೋಗುತ್ತಿದ್ದವು. ಈ ಸಂದರ್ಭದಲ್ಲಿ ಮುಂದೆ ಚಲಿಸುತ್ತಿದ್ದ ಬಸ್ ಗೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಎರಡೂ ಬಸ್ ಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ.

ಅನಾರೋಗ್ಯದಿಂದ ಬಳಲುತ್ತಿದ್ದ ಬಿಇಓ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದರೆ, ಹಲವರು ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪೊಲೀಸ್ ಠಾಣೆಯ ಎ ಎಸ್ ಐ ನರೇಶ್, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...