alex Certify ಬಸ್ ಚಾಲನೆ ಮಾಡುವಾಗಲೇ ಚಾಲಕನಿಗೆ ಹೃದಯಾಘಾತ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಚಾಲನೆ ಮಾಡುವಾಗಲೇ ಚಾಲಕನಿಗೆ ಹೃದಯಾಘಾತ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬಸ್ ಚಲಾಯಿಸುವಾಗಲೇ ಚಾಲಕನಿಗೆ ಹೃದಯಘಾತವಾಗಿದ್ದು, ಇದರ ಪರಿಣಾಮ ಅಡ್ಡಾದಿಡ್ಡಿಯಾಗಿ ಚಲಿಸಿದ ಬಸ್ ಇಬ್ಬರನ್ನು ಬಲಿ ಪಡೆದಿದೆ. ಈ ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ವೈರಲ್ ಆಗಿದೆ.

ಇಂಥದೊಂದು ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ಡಿಸೆಂಬರ್ 1ರ ಗುರುವಾರ ನಡೆದಿದ್ದು, ಟ್ರಾಫಿಕ್ ಸಿಗ್ನಲ್ ಬಳಿ ಬಸ್ ಬಂದಾಗ ಚಾಲಕನಿಗೆ ಹೃದಯಘಾತವಾಗಿದೆ.

ಇದರಿಂದಾಗಿ ಬಸ್ ಹತೋಟಿ ತಪ್ಪಿದ್ದು, ಸಿಗ್ನಲ್ ಗಾಗಿ ಕಾಯುತ್ತಿದ್ದವರ ಮೇಲೆ ಹರಿದಿದೆ. ಇದರ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಟೇರಿಂಗ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದ ಬಸ್ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತನೂ ಕೂಡ ಸಾವಿಗೀಡಾಗಿದ್ದಾನೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...