alex Certify ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ತಾನೇ ಚಲಿಸಿದ ಬಸ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ತಾನೇ ಚಲಿಸಿದ ಬಸ್…!

ಚಿಕ್ಕಮಗಳೂರು: ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಬಸ್ ಬಹುತೇಕ ಹಾನಿಯಾಗಿದ್ದಲ್ಲದೇ, ತಾನೇ ಚಲಾಯಿಸಿ ಮುಂದಿದ್ದ ಇನ್ನೊಂದು ಬಸ್ ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.

ಖಾಸಗಿ ಬಸ್ ನ್ನು ಕೊಟ್ಟಿಗೆಹಾರ ಪೆಟ್ರೋಲ್ ಬಂಕ್ ಹತ್ತಿರ ನಿಲ್ಲಿಸಲಾಗಿತ್ತು. ಆದರೆ, ಮಧ್ಯರಾತ್ರಿ ಬಸ್ ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಆಗ ಬಸ್ ತಾನೇ ಚಲಿಸಿದ್ದು, ಮುಂದೆ ನಿಂತಿದ್ದ ಇನ್ನೊಂದು ಬಸ್ ಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ ಈ ರೀತಿ ಬೆಂಕಿ ಕಾಣಿಸಿಕೊಂಡಿದ್ದು, ಮುಂದೆ ಚಲಿಸಿದ್ದು ಹಾಗೂ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ವಿಡಿಯೋ ನೋಡಿದವರಿಗೆ ಇದು ಆಶ್ಚರ್ಯ ಎನಿಸುತ್ತಿದ್ದು, ಈ ಘಟನೆಗೆ ನಿಖರ ಕಾರಣ ಮಾತ್ರ ಇದುವರೆಗೂ ತಿಳಿದು ಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...