alex Certify ಬಾಡಿಗೆದಾರರಿಗೆ ಮುಖ್ಯ ಮಾಹಿತಿ: ಉಚಿತ ‘ವಿದ್ಯುತ್ ಯೋಜನೆ’ ಪಡೆಯುವುದು ಹೇಗೆ….? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಡಿಗೆದಾರರಿಗೆ ಮುಖ್ಯ ಮಾಹಿತಿ: ಉಚಿತ ‘ವಿದ್ಯುತ್ ಯೋಜನೆ’ ಪಡೆಯುವುದು ಹೇಗೆ….? ಇಲ್ಲಿದೆ ಮಾಹಿತಿ

ಬೆಂಗಳೂರು : ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ (200 units of free electricity) ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದು, ಈ ಮೂಲಕ ಕೆಲವು ಕಂಡೀಷನ್ ಗಳೊಂದಿಗೆ ಬಾಡಿಗೆದಾರರಿಗೂ ಸರ್ಕಾರ ಉಚಿತ ವಿದ್ಯುತ್ ಭಾಗ್ಯ ಕಲ್ಪಿಸಿದೆ.

ಈ ಬಗ್ಗೆ ಟ್ವೀಟ್ ಮೂಲಕ ಕಾಂಗ್ರೆಸ್ ಸ್ಪಷ್ಟನೆ ನೀಡಿದ್ದು, ನಮ್ಮ ಗ್ಯಾರಂಟಿ ಯೋಜನೆಗಳು

(Guarantee schemes) ಸಮಾಜ ಕಲ್ಯಾಣದ ಕಾರ್ಯಕ್ರಮಗಳಾಗಿವೆ. ಗೃಹಜ್ಯೋತಿ ಯೋಜನೆಯು ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಅನ್ವಯವಾಗಲಿದೆ .ಕೆಲವು ಮಾಧ್ಯಮಗಳು ಹಾಗೂ ಬಿಜೆಪಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದು, ಸಾರ್ವಜನಿಕರು ಅದಕ್ಕೆ ಬಲಿಯಾಗಬಾರದು. ಬಾಡಿಗೆ ಮನೆಯ ವಾಸಿಗಳು ಈ ಕೆಳಕಂಡ ಮಾರ್ಗಸೂಚಿಯನ್ನು ಅನುಸರಿಸಿ ಯೋಜನೆಯ ಪ್ರಯೋಜನ ಪಡೆಯಬಹುದು ಎಂದು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.

* ಸ್ವಂತ ಮನೆಯವರಿಗೆ
• ಆರ್.ಆರ್. ನಂಬರ್ ನೊಂದಿಗೆ ಆಧಾರ್ ಲಿಂಕ್ ಮಾಡಿದರೆ ಆಯಿತು.
• ಒಂದಕ್ಕಿಂತ ಹೆಚ್ಚು ಮನೆಯಿದ್ದರೆ ಒಂದು ಮನೆಗೆ ಮಾತ್ರ ಅವಕಾಶ
• ಎರಡು ಮೀಟರ್ ಹೊಂದಿದ್ದರೆ ಯಾವುದಾದರೂ ಒಂದಕ್ಕೆ ಮಾತ್ರ ಲಭ್ಯ

* ಬಾಡಿಗೆದಾರರಿಗೆ
• ವಾಸವಿರುವ ಮನೆಯ ಆರ್ಆರ್ ಸಂಖ್ಯೆಯೊಂದಿಗೆ ತಮ್ಮ ಆಧಾರ್ ಲಿಂಕ್ ಮಾಡಬೇಕು.
ಇದಕ್ಕೆ ಬಾಡಿಗೆ ಮನೆಯ ಕರಾರು ಪತ್ರವನ್ನು ವೆಬ್ ಸೈಟ್ನಲ್ಲಿ ಅಪ್ಲೋಡ್ ಮಾಡಬೇಕು.
• ಒಂದು ದಾಖಲೆಯನ್ನು ಒಂದು ಮೀಟರ್ ನೊಂದಿಗೆ ಮಾತ್ರ ಲಿಂಕ್ ಮಾಡಲು ಅವಕಾಶ.
• ಮನೆ ಬದಲಾಯಿಸಿದರೆ, ಹಿಂದಿನ ಮನೆಯ ಮೀಟರ್ ನೊಂದಿಗಿನ ಲಿಂಕ್ ತಗೆಯಬೇಕು.
• ಹೊಸ ಬಾಡಿಗೆ ಮನೆಯ ಆರ್.ಆರ್. ನಂಬರ್ ಮತ್ತು ಆಧಾರ್ ಕಾರ್ಡ್ ಪುನಃ ಲಿಂಕ್ ಮಾಡಬೇಕು

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...